ಲಕ್ನೋ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಲಕ್ನೋದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರ ಸಹ ಅರ್ಚಕರಾದ ಕಮಲ್ ನಯನ್ ದಾಸ್, ‘ಅವರು ಕೋವಿಡ್ ಸೋಂಕಿಗೆ ಒಳಗಾದ ನಂತರ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಕಾಲಾನಂತರದಲ್ಲಿ ಅವರ ಆರೋಗ್ಯವು ಹದಗೆಟ್ಟಿದೆ’ ಎಂದು ಮಾಹಿತಿ ನೀಡಿದ್ದಾರೆ.
84 ವರ್ಷದ ಮಹಾಂತ್ ನೃತ್ಯ ಗೋಪಾಲ್ ದಾಸ್ ಅವರು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದರಿಂದ ಐಸಿಯುಗೆ ದಾಖಲಿಸಲಾಗಿದೆ. ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
Advertisement. Scroll to continue reading.
ಮಹಂತ್ ನೃತ್ಯ ಗೋಪಾಲ್ ದಾಸ್ ಅವರಿಗೆ ಮೂತ್ರನಾಳದ ಸೋಂಕು, ತೀವ್ರ ಮೂತ್ರಪಿಂಡ ವೈಫಲ್ಯವಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಆದರೆ ಸ್ಥಿರವಾಗಿದೆ ಎನ್ನಲಾಗಿದೆ.