ಬೆಂಗಳೂರು : ರಾಜ್ಯದಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದೂ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲಲ್ಲಿ ಮಳೆ ?
Advertisement. Scroll to continue reading.
ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕ ಸೇರಿದಂತೆ ಮುಂದಿನ 4 ದಿನ ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿ ಬಂಗಾಳದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement. Scroll to continue reading.