ನವದೆಹಲಿ : ತಮಿಳುನಾಡಿನಲ್ಲಿ ಇಂದು ಮುಂಜಾನೆ ನಡೆದ ವಿದ್ಯುತ್ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕಂಬನಿ ಮಿಡಿದಿದ್ದಾರೆ. ಇದೇ ವೇಳೆ ಅವರು ಮೃತರ ಕುಟಂಬಕ್ಕೆ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತಮಿಳುನಾಡಿನ ತಂಜಾವೂರಿನಲ್ಲಿ ದುರ್ಘಟನೆಯಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಸಿದವರಿಗೆ PMNRF ನಿಂದ ತಲಾ 2 ಲಕ್ಷ ನೀಡಲಾಗುವುದು.
ಗಾಯಾಳುಗಳಿಗೆ ರೂ. 50,000 ನೀಡಲಾಗುವುದು ಅಂತ ಅವರು ಟ್ವಿಟ್ ಮಾಡಿದ್ದಾರೆ.
ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ದೇವಸ್ಥಾನದ ರಥೋತ್ಸವದ ವೇಳೆ ಹೈ ಟೆನ್ಷನ್ ಟ್ರಾನ್ಸ್ಮಿಷನ್ ಲೈನ್ ಸಂಪರ್ಕಕ್ಕೆ ಬಂದಾಗ ಇಬ್ಬರು ಮಕ್ಕಳು ಸೇರಿದಂತೆ 11 ಜನರು ವಿದ್ಯುತ್ ಸ್ಪರ್ಶಿಸಿ ಸಾವನಪ್ಪಿದ್ದಾರೆ.
Advertisement. Scroll to continue reading.
ತಂಜಾವೂರಿನ ಅಪ್ಪರ ಸ್ವಾಮಿ ದೇವಾಲಯದಲ್ಲಿ ನಿನ್ನೆ ರಥೋತ್ಸವ ನಡೆಯುತ್ತಿತ್ತು. ಅಲಂಕೃತಗೊಂಡಿದ್ದ ರಥವನ್ನು ಗ್ರಾಮದ ಬೀದಿಗಳಲ್ಲಿ ಎಳೆಯಲಾಗುತ್ತಿತ್ತು. ಈ ವೇಳೆ ರಥಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಸುಮಾರು 15 ಮಂದಿಗೆ ಸುಟ್ಟ ಗಾಯಗಳಾಗಿವೆ .
ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕೂಡ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
Advertisement. Scroll to continue reading.