ಬೆಂಗಳೂರು: ಬಂಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಈಶಾನ್ಯ ರಾಜ್ಯಗಳು, ಬಿಹಾರ, ಜಾರ್ಖಂಡ್, ಕೇರಳದಲ್ಲಿ ಮಳೆಯಾಗಿದೆ. ಅಲ್ಲದೇ ಇನ್ನೂ ಮೂರು ದಿನ ಚದುರಿದ, ಭಾರೀ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲೂ ಭಾರಿ ಮಳೆಯಾಗಲಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಬಿಹಾರ, ಅರುಣಾಚಲ ಪ್ರದೇಶ, ಅಸ್ಸೋಂ , ತ್ರಿಪುರಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಕರಾವಳಿ ಆಂಧ್ರ ಪ್ರದೇಶದಲ್ಲಿ 40 ಮಿ.ಮೀ.ಗೂ ಹೆಚ್ಚು ಮಳೆಯಾಗಿದೆ. ಮುಂದಿನ 2 ದಿನಗಳಲ್ಲಿ ಗುಡುಗು, ಮಿಂಚು, ಗಾಳಿ ಸಮೇತ ಇನ್ನಷ್ಟು ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಸಿದೆ.
Advertisement. Scroll to continue reading.
ರಾಜ್ಯದಲ್ಲೂ ಮಳೆ :
ರಾಜ್ಯದ ಹಲವೆಡೆ ಈಗಾಗಲೇ ಮಳೆಯಾಗುತ್ತಿದೆ. ಮುಂದಿನ 4 ದಿನ ಕೂಡ ಇದೇ ರೀತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 6ರವರೆಗೆ ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿದೆ.
Advertisement. Scroll to continue reading.