ಉಡುಪಿ : ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ಅವರು ಫೇಸ್‌ಬುಕ್‌ನಲ್ಲಿ ರಾಜೀನಾಮೆ ಪತ್ರ ಪ್ರಕಟಿಸುವ ಮೂಲಕ ದೃಢಪಡಿಸಿದ್ದಾರೆ.
ಶನಿವಾರ ಮಧ್ಯಾಹ್ನ ಫೇಸ್ ಬುಕ್ ಪುಟದಲ್ಲಿ My Resignation to Congress Party ಎಂಬ ಪೋಸ್ಟ್ ಹಾಕಿದ್ದು, ರಾಜೀನಾಮೆ ಪತ್ರದವನ್ನು ಲಗತ್ತಿಸಿದ್ದಾರೆ. ಪತ್ರವನ್ನು ಟ್ವೀಟ್ ಕೂಡಾ ಮಾಡಿದ್ದಾರೆ.
2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದಿದ್ದ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.
Advertisement. Scroll to continue reading.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತು ಪತ್ರವನ್ನು ರವಾನಿಸಿದ್ದು, ಕೆಲವು ದಿನಗಳ ಹಿಂದೆ ಕೆಪಿಸಿಸಿ ತಮ್ಮನ್ನು ಉಪಾಧ್ಯಕ್ಷರಾಗಿ ನೇಮಿಸಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.
ಪಕ್ಷ ಸಂಘಟನೆಗೆ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದವನ್ನೂ ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಉಡುಪಿ ಕಾಂಗ್ರೆಸ್ ಘಟಕದ ಪರಿಸ್ಥಿತಿ ಸರಿ ಇಲ್ಲ. ಈ ಕುರಿತು ನಿಮ್ಮ ಜೊತೆ ಸಹ ಚರ್ಚೆ ನಡೆಸಿದ್ದೆ ಎಂದು ಪ್ರಮೋದ್ ಮಧ್ವರಾಜ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Advertisement. Scroll to continue reading.