ಬೆಂಗಳೂರು: ಅಸಾನಿ ಚಂಡಮಾರುತದ ಪರಿಣಾಮದಿಂದ ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆಯಾಗಲಿದೆ. ಮುಂದಿನ 3 ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೀಗಾಗಿ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಿದೆ.
ಅಸಾನಿ ಚಂಡಮಾರುತವು ಆಂಧ್ರಪ್ರದೇಶದ ವಿಶಾಖಪಟ್ಟಣಂ, ಒಡಿಶಾದ ಪುರಿಗೆ ಕಾಲಿಟ್ಟಿದ್ದು, ಪರಿಣಾಮ ಇಂದು ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
Advertisement. Scroll to continue reading.
ಎಲ್ಲೆಲ್ಲಿ ಮಳೆ ?
ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಹಾಸನ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಹಾವೇರಿ, ಮೈಸೂರು, ಚಾಮರಾಜನಗರ, ಗದಗ, ದಾವಣಗೆರೆ, ಯಾದಗಿರಿ, ಬೆಳಗಾವಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
Advertisement. Scroll to continue reading.