ಬ್ರಹ್ಮಾವರ : ಸಾಸ್ತಾನ ಸೈಂಟ್ ಥೋಮಸ್ ಇಗರ್ಜಿಯ ಉದ್ಘಾಟನೆಗೆ ಸಕಲ ಸಿದ್ಧತೆ
Published
1
ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಓರ್ಥೋ ಡೋಕ್ಸ್ ಸಿರಿಯನ್ ಇಗರ್ಜಿಯಾದ ಸಾಸ್ತಾನ ಸೈಂಟ್ ಥೋಮಸ್ ಇಗರ್ಜಿಯು ನವೀಕೃತಗೊಂಡು ಪವಿತ್ರೀಕರಣ ಹಾಗೂ ಉದ್ಘಾಟನಾ ಸಮಾರಂಭ ಮೇ 17 ಮತ್ತು 18 ರಂದು ನಡೆಯಲಿದ್ದು ಕಾರ್ಯಕ್ರಮದ ಸಿದ್ಧತೆ ಭರದಿಂದ ನಡೆಯುತ್ತಿದೆ.
ಈ ಸಂದರ್ಭ ಶುಕ್ರವಾರ ಸಂಜೆ ಬ್ರಹ್ಮಾವರ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಯಾಕೋಬ್ ಮಾರ್ ಏಲಿಯಾಸ್ ನೂಥನವಾಗಿ ನಿರ್ಮಾಣಗೊಂಡ ಇಗರ್ಜಿಯನ್ನು ಕಂಡು ಮೆಚ್ಚುಗೆ ವ್ಯಕ್ತ ಪಡಿಸಿದರು.
Advertisement. Scroll to continue reading.
ನವೀಕರಣದ ಸಂದರ್ಬ ತಾತ್ಕಾಲಿಕವಾಗಿ ಇರಿಸಲಾದ ಇಲ್ಲಿನ ದೇವರಿಗೆ ಪೂಜೆ ಮಾಡಿದರು. ಇದೇ ಸಂದರ್ಭ ಪವಿತ್ರೀಕರಣ ಹಾಗೂ ಉದ್ಘಾಟನಾ ಸಮಾರಂಭಕ್ಕೆ ನಾನಾ ಮಾರ್ಗದರ್ಶನ ಹಾಗೂ ಸಲಹೆ ನೀಡಿದರು.
ಮಹಿಳೆಯರು ಮತ್ತು ಪುರುಷರು ಸೇರಿದಂತೆ ಸಿದ್ದತೆಗಾಗಿ ದುಡಿಯುವ ಇಲ್ಲಿನ ಸ್ವಯಂ ಸೇವಕರನ್ನು ಆರ್ಶಿವಚಿಸಿದರು. ಫಾದರ್ ನೋವೇಲ್ ಲೂಯಿಸ್ , ಬ್ರಹ್ಮಾವರ ಎಸ್ ಎಂ ಎಸ್ ಚರ್ಚನ ಧರ್ಮಗುರು ರೆವರೆಂಡ್ ಫಾಧರ್ ಮಥಾಯಿ, ಜೀಣೋದ್ಧಾರದ ಅಧ್ಯಕ್ಷ ಮೋಸೆಸ್ ರೋಡ್ರಿಗಸ್ , ಕಾರ್ಯದರ್ಶಿ ರೋಬರ್ಟ್ ರೋಡ್ರಿಗಸ್ , ಖಜಾಂಚಿ ಜೇರಾಲ್ಡ್ ರೋಡ್ರಿಗಸ್ ಮತ್ತು ಟ್ರಸ್ಟಿ ಲಾರೆನ್ಸ್ ಅಲ್ಮೇಡಾ , ಮಿಲ್ಟನ್ ಅಲ್ಮೇಡಾ ಹಾಗೂ ಹಲವಾರು ಮಂದಿ ಉಪಸ್ಥಿತರಿದ್ದರು.
0 ಬ್ರಹ್ಮಾವರ : ರುಡ್ ಸೆಟ್ ಬ್ರಹ್ಮಾವರ ಮತ್ತು ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...