ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ವಿಧಾನ ಪರಿಷತ್ ಸ್ಥಾನಕ್ಕೆ ಶಿಫಾರಸು ಮಾಡಲು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಸಂಬಂಧಪಟ್ಠಂತೆ ಇಂದು ನಡೆದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಸಭೆ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಹೆಸರು ಮತ್ತು ಪರಿಷತ್ ಸ್ಥಾನದ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಹೆಸರನ್ನೂ ಕಳುಹಿಸಿದೆ ಎನ್ನಲಾಗಿದೆ.
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆ, ರಾಜ್ಯ ಸಭೆ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುಣಾವಣೆ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
Advertisement. Scroll to continue reading.
ಇದಲ್ಲದೇ ರಾಜ್ಯಸಭೆ ಅಭ್ಯರ್ಥಿಯಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಲೆಹರ್ ಸಿಂಗ್ ಕೆ.ಸಿ ರಾಮಮೂರ್ತಿ ಸೇರಿದಂತೆ 5 ಹೆಸರುಗಳನ್ನು ಹೆಸರನ್ನೂ ಪ್ರಸ್ತಾಪಿಸಲಾಗಿದೆ ಎನ್ನಲಾಗಿದೆ.