ನವದೆಹಲಿ : ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು 1988 ರ ರೋಡ್ ರೇಜ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಶರಣಾಗಲು ಒಂದು ವಾರ ಕಾಲಾವಕಾಶ ಬೇಕು ಎಂದು ಸುಪ್ರೀಂಕೋರ್ಟ್ ಗೆ ವಿನಂತಿಸಿದ್ದಾರೆ.
34 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು ಶರಣಾಗಲು ಸಮಯಾವಕಾಶ ಕೋರಿದ ನವಜೋತ್ ಸಿಂಗ್ ಸಿಧುಗೆ ಈ ಬಗ್ಗೆ ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿದೆ. ಕೋರ್ಟ್ ಸೂಚನೆಯ ಮೇರೆಗೆ ಸಿಧು ಪರವಾಗಿ ಅರ್ಜಿ ಸಲ್ಲಿಸಿದ ವಕೀಲ ಅಭಿಷೇಕ್ ಮನುಸಿಂಘ್ವಿ, ನವಜೋತ್ ಸಿಂಗ್ ಸಿಧು ಶರಣಾಗುತ್ತಾರೆ. ಆರೋಗ್ಯ ಸಮಸ್ಯೆ ಇರುವುದರಿಂದ, ಪರಿಹಾರಕ್ಕಾಗಿ ಒಂದು ವಾರ ಕಾಲಾವಕಾಶ ಬೇಕು ಎಂದು ಕೋರಿದ್ದಾರೆ.
65 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡ ಪ್ರಕರಣದಲ್ಲಿ ಸಿಧು ಅವರನ್ನು ಅಪರಾಧಿ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿದ್ದರೂ, ಸುಪ್ರೀಂ ಕೋರ್ಟ್ ಮೇ 15, 2018 ರಂದು ತೀರ್ಪನ್ನು ರದ್ದುಗೊಳಿಸಿತು.
Advertisement. Scroll to continue reading.
ಗುರುವಾರ, ನ್ಯಾಯಮೂರ್ತಿ ಖಾನ್ವಿಲ್ಕರ್ ನೇತೃತ್ವದ ಪೀಠವು ಸಿಧುಗೆ ದಂಡದ ಜೊತೆಗೆ ಒಂದು ವರ್ಷದ ಕಠಿಣ ಜೈಲು ಶಿಕ್ಷೆಯನ್ನು ಹೆಚ್ಚಿಸಿತು.