ಬ್ರಹ್ಮಾವರ : ವಿಕಲಚೇತನರಿಗೆ ಶಾಸಕ ರಘುಪತಿ ಭಟ್ ಅವರಿಂದ ತ್ರಿಚಕ್ರ ವಾಹನ ಹಸ್ತಾಂತರ
Published
1
ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ 2021-22 ನೇ ಸಾಲಿನ “ಅಂಗವಿಕಲರ ಶ್ರೇಯೋಭಿವೃದ್ಧಿ ನಿಧಿ”ಯಿಂದ ಶಾಸಕ ಕೆ.ರಘುಪತಿ ಭಟ್ ಅವರ ಶಿಫಾರಸಿನ ಮೇರೆಗೆ ಮಂಜೂರಾದ ತ್ರಿಚಕ್ರ ವಾಹನಗಳನ್ನು ಇಂದು ಕೆ. ರಘುಪತಿ ಭಟ್ ಅವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಕುದ್ರು ನಿವಾಸಿ ಚಂದ್ರಕಾಂತ್ ಹಾಗೂ ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಗ್ರಾಮದ ನಿವಾಸಿ ಹರೀಶ್ ಪೂಜಾರಿ ಸೇರಿದಂತೆ ಒಟ್ಟು ಎರಡು ಫಲಾನುಭವಿಗಳಿಗೆ ಶಾಸಕ ರಘುಪತಿ ಭಟ್ ಶಿಫಾರಸ್ಸಿನ ಮೇರೆಗೆ ತ್ರಿಚಕ್ರ ವಾಹನ ಮಂಜೂರಾಗಿದೆ.
Advertisement. Scroll to continue reading.
ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ವೀಣಾ ನಾಯ್ಕ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ದೇವಾಡಿಗ, ಉಪಾಧ್ಯಕ್ಷ ಉದಯ್ ಪೂಜಾರಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷ ಮೀರಾ ಸದಾನಂದ ಪೂಜಾರಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಚಾಂತಾರು ಗ್ರಾಮ ಪಂಚಾಯತ್ ಸದಸ್ಯ ಹೇಮಾ ಅಶೋಕ್, ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ನಾಯ್ಕ್ ಉಪಸ್ಥಿತರಿದ್ದರು.