ಉಡುಪಿ : ಕಾಂಗ್ರೆಸ್ ಪಕ್ಷದ ಸಕ್ರಿಯ ನಾಯಕ, ಉಡುಪಿ ನಗರಸಭೆಯ ಮಾಜಿ ಕಾಂಗ್ರೆಸ್ ಬೆಂಬಲಿತ ನಗರಸಭಾ ಸದಸ್ಯ ಸುರೇಶ್ ಸೇರಿಗಾರ ಬೈಲಕೆರೆ (52)ರವರು ನಿಧನರಾಗಿದ್ದಾರೆ.
ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು, ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉದಯವಾಣಿ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿ, ನಂತರ ದಿನಗಳಲ್ಲಿ ಖಾಸಗಿ ಬಸ್ ನಡೆಸಿಕೊಳ್ಳುತ್ತಿದ್ದರು.
ಮೃತರು ಪತ್ನಿ ಒಂದು ಗಂಡು ಒಂದು ಹೆಣ್ಣು ಮಕ್ಕಳನ್ನು ಹಾಗೂ ಅಪಾರ ಕಾಂಗ್ರೆಸ್ ಪಕ್ಷದ ತಳ ಮಟ್ಟದ ಕಾರ್ಯಕರ್ತ ಮಿತ್ರರನ್ನು ಅಗಲಿದ್ದಾರೆ.
Advertisement. Scroll to continue reading.
ಮೃತರಿಗೆ ಮಾಜಿ ಶಾಸಕ ಯು.ಆರ್ ಸಭಾಪತಿ, ಜಯ ಶೆಟ್ಟಿ ಬನ್ನಂಜೆ, ಗಣೇಶ್ ರಾಜ್ ಸರಳೇಬೆಟ್ಟು ಸಂತಾಪ ಸೂಚಿಸಿದ್ದಾರೆ.
ನಾಳೆ ಬೆಳಿಗ್ಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Advertisement. Scroll to continue reading.