ಬಿಹಾರ: ಕಾರ್ಮಿಕರನ್ನು ಹೊತ್ತು ತೆರಳುತ್ತಿದ್ದ ಟ್ರಕ್ ಪಲ್ಟಿಯಾದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ದುರಂತ ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಇಂದು ನಡೆದಿದೆ.
18 ಕಾರ್ಮಿಕರನ್ನು ಹಾಗೂಪೈಪ್ ತುಂಬಿದ ಟ್ರಕ್ ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗುತ್ತಿತ್ತು. ಈ ವೇಳೆ ಪಲ್ಟಯಾಗಿದೆ. ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಕಾರ್ಮಿಕರು ಕಬ್ಬಿಣದ ಪೈಪ್ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಮೃತದೇಹಗಳನ್ನು ಸ್ಥಳದಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
Advertisement. Scroll to continue reading.
ಪುರ್ನಿಯಾದ ಜಲಾಲ್‌ಗಢ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಟ್ರಕ್ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.
Advertisement. Scroll to continue reading.