ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಉಪ್ಪಿನ ಕುದ್ರು ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಸಾವಿಗೆ ಪ್ರಚೋದನೆ ನೀಡಿದ ಆರೋಪಿಗಳಿಬ್ಬರ ಪೈಕಿ ಪ್ರಕರಣದ ಪ್ರಮೂಖ ಆರೋಪಿ ಅಜೀಜ್ ನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಅಜೀಜ್ ಶಿಲ್ಪಾ ಸ್ನೇಹ ಬೆಳೆಸಿಕೊಂಡಿದ್ದು.ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಮಾಡಿಕೊಂಡಿದ್ದ. ಬಳಿಕ ಮತಾಂತರವಾಗಿ ಮದುವೆ ಮಾಡುಕೊಳ್ಳುವಂತೆ ಶಿಲ್ಪಾಗೆ ಒತ್ತಾಯ ಮಾಡಿದ್ದು ಇದರ ಬೆನ್ನಲ್ಲೇ ಶಿಲ್ಪಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಫಲಿಸದೆ ಶಿಲ್ಪಾ ಸಾವನ್ನಪ್ಪಿದ್ದಳು.
Advertisement. Scroll to continue reading.
ಶಿಲ್ಪಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅಜೀಜ್ ಮತ್ತು ಆತನ ಪತ್ನಿ ಸಲ್ಮಾ ವಿರುದ್ದ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿತ್ತು.