ಶಿವಮೊಗ್ಗ : ರೈತ ಸಂಘ ಹಾಗೂ ಹಸಿರು ಸೇನೆಯಿಂದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ
ಇಂದು ಈ ಬಗ್ಗೆ ರಾಜ್ಯ ರೈತ ಸಂಘದಿಂದ ಶಿವಮೊಗ್ಗದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಇಂದು 18 ಜಿಲ್ಲೆಗಳ ರೈತ ಸಂಘದ ಪದಾಧಿಕಾರಿಗಳು, ರಾಜ್ಯ ಸಮಿತಿ ಪದಾಧಿಕಾರಿಗಳು ಸಭೆ ಸೇರಿ ಸಮಾಲೋಚನೆ ನಡೆಸಿದರು.
ಈ ಸಭೆಯಲ್ಲಿ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಿ ತೀರ್ಮಾನ ಕೈಗೊಳ್ಳಲಾಗಿದೆ.
Advertisement. Scroll to continue reading.
ಕೋಡಿಹಳ್ಳಿ ಚಂದ್ರಶೇಖರ್ ಹಣವನ್ನು ಪಡೆದು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿಯ ಪ್ರತಿಭಟನೆಯನ್ನು ಕೈಬಿಟ್ಟಿದ್ದರು ಎಂಬ ಬಗ್ಗೆ ಖಾಸಗಿ ಸುದ್ದಿವಾಹಿನಿಯೊಂದು ಸ್ಟಿಂಗ್ ಮಾಡಿ ಸುದ್ದಿಯನ್ನು ಪ್ರಸಾರ ಮಾಡಿತ್ತು.