ಕೋಲ್ಕತಾ : ಕೆಕೆ ಎಂದೇ ಖ್ಯಾತರಾಗಿದ್ದ ಗಾಯಕ ಕೃಷ್ಣಕುಮಾರ್ ಕುನ್ನಾಥ್ ಅವರು ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡುತ್ತಿದ್ದಾಗ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.
ಕೋಲ್ಕತ್ತಾದ ನಜ್ರುಲ್ ಮಂಚಾ ಆಡಿಟೋರಿಯಂನಲ್ಲಿ ಸಂಗೀತ ಕಚೇರಿ ನಡೆಸಿದ ನಂತರ ತಾವು ತಂಗಿದ್ದ ಹೋಟೆಲ್ ಗೆ ತೆರಳುತ್ತಿದ್ದಾಗ ಮೆಟ್ಟಿಲ ಮೇಲೆ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ದಕ್ಷಿಣ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರು ಮೃತಪಟ್ಟಿದ್ದಾರೆ.
Advertisement. Scroll to continue reading.
ಪ್ರಧಾನಿ ಸಂತಾಪ :
ಇನ್ನು ಕೆಕೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಗಾಯಕ ಕೃಷ್ಣಕುಮಾರ್ ಕುನ್ನತ್ ಅವರ ಅಕಾಲಿಕ ನಿಧನದ ಸುದ್ದಿ ಮನಸ್ಸಿಗೆ ನೋವು ತಂದಿದೆ. ಕೃಷ್ಣಕುಮಾರ್ ಕುನ್ನತ್ ‘ಕೆಕೆ’ ಎಂದೇ ಜನಪ್ರಿಯತೆ ಪಡೆದಿದ್ದರು. ಕೆಕೆ ಅವರ ಹಾಡುಗಳಲ್ಲಿ ಎಲ್ಲಾ ರೀತಿಯ ಭಾವನೆಗಳು ಇರುತ್ತಿದ್ದವು. ಎಲ್ಲಾ ವಯೋಮಾನದವರನ್ನ ತಮ್ಮ ಹಾಡುಗಳ ಮೂಲಕ ಕೆಕೆ ರಂಜಿಸಿದ್ದರು. ಕೆಕೆ ಅವರ ಹಾಡುಗಳ ಮೂಲಕ ಅವರನ್ನು ಸದಾ ನೆನಪಿಸಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
Advertisement. Scroll to continue reading.