ಕಾಪು: ಉಚ್ಚಿಲ ಭಾಸ್ಕರ ನಗರ ಜುಮ್ಮಾ ಮಸೀದಿ ಬಳಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಕಸಾಯಿಖಾನೆಗೆ ಪಡುಬಿದ್ರಿ ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ, ಒಂದು ಜೀವಂತ ಹಸು, ಮಾಂಸಕ್ಕೆ ಕಡಿಯಲಾದ ಹಸು ಹಾಗೂ ಮಾರಾಟಕ್ಕಿಟ್ಟ ಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಉಚ್ಚಿಲ ಭಾಸ್ಕರ ನಗರದ ಮನೆಯೊಂದರಲ್ಲಿ ಕಸಾಯಿಕಾನೆ ನಡೆಸುತ್ತದ್ದು, ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಉಚ್ಚಿಲ ನಿವಾಸಿಗಳಾದ ಮಹಮ್ಮದ್ ರಫೀಕ್(44), ಇಲಿಯಾಸ್(38), ಮಹಮ್ಮದ್ ಮೋಹಿದ್ದೀನ್(17), ಮೊಯ್ದಿನಬ್ಬ (44) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ದಿಯು ರಫೀಕ್ ಎಂಬಾತ ಪರಾರಿಯಾಗಿದ್ದಾನೆ.
ಕಾರ್ಯಾಚರಣೆಯಲ್ಲಿ ಕಾಪು ವೃತ್ತ ನಿರೀಕ್ಷಕ ಪ್ರಕಾಶ್, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಹಾಗೂ ಪಡುಬಿದ್ರಿ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ.
Advertisement. Scroll to continue reading.