ಕುಂದಾಪುರ : ರಾಜಕೀಯ ಚಾಣಾಕ್ಷ ಎಂದೇ ಖ್ಯಾತರಾಗಿದ್ದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ) ಅವರು ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
1929ರ ಅ.1ರಂದು ಜನಿಸಿದ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಜನಿಸಿದರು. ಅವರದು ಕೃಷಿಕ ಕುಟುಂಬ. ಅವರ ತಂದೆ ಕೃಷ್ಣರಾಯ ಕೊಡ್ಗಿ ಸ್ವಾತಂತ್ರ್ಯ ಹೋರಾಟಗಾರರು.
ಕೊಡ್ಗಿ ಕಾನೂನು ಪದವಿ ಪಡೆದಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಿಟ್ಟೂರು ಶ್ರೀನಿವಾಸ ರಾವ್ ಅವರೊಂದಿಗೆ ಸ್ವಲ್ಪ ಸಮಯ ವಕೀಲರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಬಳಿಕ ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಅಲ್ಲದೇ ರಾಜಕಾರಣದಲ್ಲಿಯೂ ತಮ್ಮದೇ ಆದ ಛಾಪು ಹಬ್ಬಿಸಿದ್ದಾರೆ.
Advertisement. Scroll to continue reading.
ಕೋಡ್ಗಿ ಅವರು ತಾಲೂಕು ಬೋರ್ಡ್ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
1972-83ರ ತನಕ ಬೈಂದೂರು ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. 2006-08ರ ತನಕ ರಾಜ್ಯ ಮೂರನೇ ಹಣಕಾಸು ಆಯೋಗ ಅಧ್ಯಕ್ಷರಾಗಿಯೂ, ಬಳಿಕ ಅದರ ಕಾರ್ಯಪಡೆ ಅಧ್ಯಕ್ಷರಾಗಿದ್ದರು.
ಮಂಗಳೂರು ಜಿಲ್ಲಾ ಪರಿಷತ್ ಸದಸ್ಯ, ಆರ್ಥಿಕ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಶಂಕರನಾರಾಯಣ ಸಿಎ ಬ್ಯಾಂಕ್ ಅಧ್ಯಕ್ಷ, ಎಪಿಎಂಪಿ ಅಧ್ಯಕ್ಷ, ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಸ್ಕ್ಯಾಮ್ಸ್ ನಿರ್ದೇಶಕ, ಮಂಗಳೂರು ಎಪಿಎಂಸಿ ಅಧ್ಯಕ್ಷರಾಗಿದ್ದರು.
Advertisement. Scroll to continue reading.
ಮಾರ್ಕೆಟಿಂಗ್ ಬೋರ್ಡ್ ಸದಸ್ಯರಾಗಿ, 1982-1990ರ ತನಕ ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.