ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಮಾಜಿ ಶಾಸಕ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರು ಅಲ್ಪಕಾಲದ ಅಸೌಖ್ಯಾದಿಂದಾಗಿ ಇಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎ. ಜಿ. ಕೊಡ್ಗಿ ಕ್ರಾಂತಿಕಾರಿ ಕೃಷಿಕರಾಗಿದ್ದರು, ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. ಅವರು 2 ಬಾರಿ ಶಾಸಕರಾಗಿದ್ದರು. ಮೂರನೇ ಹಣಕಾಸು ಆಯೋಗದ ಅನುಷ್ಠಾನ ಕಾರ್ಯಪಡೆಯ ಅಧ್ಯಕ್ಷರಾಗಿ, ಉಡುಪಿ ಬಿಜೆಪಿ ಘಟಕದ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ಬಿಜೆಪಿಯ ಮಾಜಿ ಉಪಾಧ್ಯಕ್ಷರಾಗಿದ್ದರು.
ಅವರ ನೇತೃತ್ವದಲ್ಲಿ ಅಮಾಸೆಬೈಲು ಕರ್ನಾಟಕದ ಮೊದಲ ಸೌರಶಕ್ತಿ ಚಾಲಿತ ಗ್ರಾಮ ಪಂಚಾಯಿತಿಯಾಗಿದೆ. ಈ ಯೋಜನೆಯ ಹಿಂದಿನ ಮೆದುಳು ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎ.ಜಿ. ಕೊಡ್ಗಿ. ಅವರು ಮೂರನೇ ಹಣಕಾಸು ಆಯೋಗದ ಅನುಷ್ಠಾನ ಕಾರ್ಯಪಡೆಯ ಅಧ್ಯಕ್ಷರಾಗಿದ್ದಾಗ ತಮ್ಮ ಗ್ರಾಮದ ಎಲ್ಲಾ ಮನೆಗಳಿಗೆ ಸೋಲಾರ್ ದೀಪಗಳನ್ನು ಒದಗಿಸುವ ಯೋಜನೆಯನ್ನು ರೂಪಿಸಿದ್ದವರು.
Advertisement. Scroll to continue reading.
ಎ.ಜಿ. ಕೊಡ್ಗಿ ಅವರ ಊರಿನ ಹಾಗೂ ಜನಪರ ಕಾಳಜಿವುಳ್ಳ ಆದರ್ಶ ವ್ಯಕ್ತಿತ್ವವನ್ನು ಸ್ಮರಿಸುತ್ತಾ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಮತ್ತು ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ
ಎಂದು ಸಂಸದ ಬಿ. ವೈ.ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ.