ಬೆಂಗಳೂರು : ನೂತನ ಲೋಕಾಯುಕ್ತರಾಗಿ ನ್ಯಾ.ಬಿ.ಎಸ್ ಪಾಟೀಲ್ ರಾಜಭವನದ ಗಾಜಿನ ಮನೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲ ಟಿ.ಸಿ.ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ, ಸಚಿವರಾದ ಆರಗ ಜ್ಞಾನೇಂದ್ರ, ಸೋಮಣ್ಣ, ಹಾಲಪ್ಪ ಉಪಸ್ಥಿತರಿದ್ದರು.
ಕಳೆದ ಎರಡು ವರ್ಷಗಳಿಂದ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಹುದ್ದೆ ಖಾಲಿ ಇತ್ತು. ಈ ಸಂಬಂಧ ಹೈಕೋರ್ಟ್ ಗೆ ಪಿಐಎಲ್ ಕೂಡ ಸಲ್ಲಿಕೆಯಾಗಿತ್ತು. ಇದೀಗ ರಾಜ್ಯ ಸರ್ಕಾರದಿಂದ ಲೋಕಾಯುಕ್ತ ನ್ಯಾಯಮೂರ್ತಿಯನ್ನಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶಿಸಿದೆ.
Advertisement. Scroll to continue reading.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿರ್ದೇಶನದ ಮೇರೆಗೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ನೂತನ ಲೋಕಾಯುಕ್ತರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ.