ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿ
Published
2
ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2022 ರ ಸ್ಕೈಟ್ರಾಕ್ಸ್ ವಿಶ್ವ ವಿಮಾನ ನಿಲ್ದಾಣ ಪ್ರಶಸ್ತಿಗಳಲ್ಲಿ ಭಾರತದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಪ್ರಶಸ್ತಿ ಪಡೆದಿದೆ.
ಜಾಗತಿಕವಾಗಿ ನಡೆಸಲಾದ ಸಮೀಕ್ಷೆಯಲ್ಲಿ ಗ್ರಾಹಕರಿಂದ ಬಂದ ಪ್ರತಿಕ್ರಿಯೆಯನ್ನು ಆಧರಿಸಿ ಈ ಪ್ರಶಸ್ತಿಯನ್ನು ನೀಡುವ ಪ್ರಕ್ರಿಯೆ ನಡೆಯುತ್ತದೆ.
ಸಮೀಕ್ಷೆಯು ಚೆಕ್-ಇನ್ ನಿಂದ ಆಗಮನ, ವರ್ಗಾವಣೆಗಳು, ಶಾಪಿಂಗ್, ಭದ್ರತೆ, ವಲಸೆ ಮತ್ತು ನಿರ್ಗಮನ ದ್ವಾರಗಳಲ್ಲಿನ ವ್ಯವಸ್ಥೆಗಳ ವರೆಗಿನ ಗ್ರಾಹಕರ ಅನುಭವವನ್ನು ಮೌಲ್ಯಮಾಪನ ಮಾಡಲಾಗುತ್ತದೆ.
Advertisement. Scroll to continue reading.
ಜೂನ್ 16 ರಂದು ಫ್ರಾನ್ಸ್ನ ಪ್ಯಾಸೆಂಜರ್ ಟರ್ಮಿನಲ್ ಎಕ್ಸ್ಪೋದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಈ ಕಾರ್ಯಕ್ರಮವು ವಿಮಾನ ನಿಲ್ದಾಣ ವಲಯಕ್ಕೆ ಅತ್ಯಂತ ಪ್ರತಿಷ್ಠಿತ ಗುಣಮಟ್ಟದ ಪ್ರಶಸ್ತಿಗಳಲ್ಲಿ ಒಂದಾಗಿದೆ. ಪ್ರಪಂಚದಾದ್ಯಂತದ ವಿಮಾನ ನಿಲ್ದಾಣಗಳ ಸಿಇಒಗಳು, ಅಧ್ಯಕ್ಷರು ಮತ್ತು ಹಿರಿಯ ಆಡಳಿತ ಮಂಡಳಿಯವರು ಕಾರ್ಯಕ್ರಮದಲ್ಲಿ ಹಾಜರಿದ್ದರು ಎಂದು ವಿಮಾನ ನಿಲ್ದಾಣವು ತಿಳಿಸಿದೆ.
ಬೆಂಗಳೂರು ವಿಮಾನ ನಿಲ್ದಾಣವು ಈ ವರ್ಷದ ಆರಂಭದಲ್ಲಿ ವಿಂಗ್ಸ್ ಇಂಡಿಯಾ ಅವಾರ್ಡ್ಸ್ ನಲ್ಲಿ ಅತ್ಯುತ್ತಮ ವಿಮಾನ ನಿಲ್ದಾಣ ಮತ್ತು ವಾಯುಯಾನ ಆವಿಷ್ಕಾರ ಪ್ರಶಸ್ತಿಯನ್ನು ಗೆದ್ದಿತ್ತು.