ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ರಾಜ್ಯದ ಕಂದಾಯ ಮಂತ್ರಿಯವರು ಬ್ರಹ್ಮಾವರ ಬಳಿಯಲ್ಲಿ ಮಾಡಿದ ಗ್ರಾಮ ವಾಸ್ತವ್ಯದಿಂದ ಗ್ರಾಮ ಮಟ್ಟದ ಸಮಸ್ಯೆಯನ್ನು ಕಂಡ ನಮಗೆ ಉಡುಪಿ ಜಿಲ್ಲೆಯ ಎಲ್ಲಾ ಭಾಗದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜೊತೆಯಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮಾಡಲು ಸ್ಪೂರ್ತಿ ಬಂದಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.
ಶನಿವಾರ ಚೇರ್ಕಾಡಿ ಯುವಕ ಮಂಡಲದಲ್ಲಿ ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ, ಬ್ರಹ್ಮಾವರ ತಾಲೂಕು ಆಡಳಿತ ನೇತೃತ್ವದಲ್ಲಿ ಜರುಗಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, 3 ತಲೆಮಾರಿನಿಂದ ಖಾತೆ ಬದಲಾವಣೆ ಯಾಗದೆ ಗ್ರಾಮೀಣ ಭಾಗದಲ್ಲಿ ಸರಕಾರದ ಸೌಲಭ್ಯ ವಂಚಿತರಾಗಿ ಪ್ರಗತಿಗೆ ಅಡ್ಡಿಯಾಗುವ ವ್ಯವಸ್ಥೆಯನ್ನು ಅತೀ ಶೀಘ್ರದಲ್ಲಿ ಸರಿ ಮಾಡಲಾಗುವುದು. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಇರುವ ಇಂತಹ ಕಾರ್ಯಕ್ರಮಗಳಿಂದ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ ಎಂದರು.
ಉಡುಪಿ ಶಾಸಕ ಕೆ.ರಘುಪತಿ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ ಚೇರ್ಕಾಡಿ ರಸ್ತೆ ಅಗಲೀಕರಣದ ಭೂ ಸ್ವಾಧಿನತೆಯನ್ನು ಕಡಿಮೆ ಮಾಡುವಂತೆ ಮತ್ತು ಅತೀ ಹೆಚ್ಚು ಪರಿಶಿಷ್ಟ ಪಂಗಡದವರು ಇರುವ ಚೇರ್ಕಾಡಿ ಗ್ರಾಮ ಪಂಚಾಯತಿಗೆ ಸರಕಾರಿ ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದವರಿಗೆ ಮನೆ ಸಿಗುತ್ತಿಲ್ಲ ಎಂದುಸಾರ್ವಜನಿಕರ ಅವಹಾಲನ್ನು ತಿಳಿಸಿದರು .
ಇನ್ನೋರ್ವ ಮಾಜಿ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೈನುಗಾರರು ಹೆಚ್ಚು ಇದ್ದು ಜೀವನೋಪಾಯಕ್ಕೆ ಹಸುವನ್ನು ಸಾಕುತ್ತಿದ್ದು ಇಲ್ಲಿನ ಪಶು ವೈದ್ಯಕೀಯ ಆಸ್ಪತ್ರೆ ಮೇಲ್ದರ್ಜೆ ಮಾಡ ಬೇಕು. ಖಾಯಂ ಪಶು ವೈದ್ಯರನ್ನು ನೇಮಕ ಮಾಡ ಬೇಕು ಎಂದು ತಿಳಿಸಿದರು.
ಚೇರ್ಕಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರೇಖಾ ಭಟ್ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಚೇರ್ಕಾಡಿ ಗ್ರಾಮ ವ್ಯಾಪ್ತಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 90 ಶೇಖಡಕ್ಕಿಂತ ಹೆಚ್ಚು ಅಂಕ ಪಡೆದ 18 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಾರ್ವಜನಿಕರ ಹಲವಾರು ಅವಹಾಲುಗಳನ್ನು ಸ್ವಿಕರೀಸಿ ಪರಿಹಾರ ನೀಡಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ನ್ಯಾಯಾದೀಶೆ ಶರ್ಮಿಳಾ , ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಸನ್ನ , ಉಪವಿಭಾಗಾಧಿಕಾರಿ ರಾಜು , ಡಿ ಎಫ್ ಓ ಆಷಿಷ್ ರೆಡ್ಡಿ,ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಟಿ. ನಾಯ್ಕ್ ಬ್ರಹ್ಮಾವರ ತಾಲೂಕು ಪಂಚಾಯತಿ ಕಾರ್ಯನಿರ್ವಣಾಧಿಕಾರಿ ಎಚ್. ಇಬ್ರಾಹಿಂ ಪುರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೆಗೌಡ , ತೋಟಗಾರಿಕೆ ಇಲಾಖೆಯ ಭುವನೇಶ್ವರೀ, ಜಿಲ್ಲಾ ವೈದ್ಯಾಧಿಕಾರಿ ನಾಗಭೂಷಣ , ಗ್ರಾಮಪಂಚಾಯತಿ ಉಪಾಧ್ಯಕ್ಷ ಕಿಟ್ಟಪ್ಪ ಅಮೀನ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ,ಅಧಿಕಾರಿಗಳು ಉಪಸ್ಥಿತರಿದ್ದರು,
ಹಾಲು ಕರೆಯುವ ಯಂತ್ರ, ಹಸು ಘಟಕ ನಿರ್ಮಾಣಕ್ಕೆ ಸಹಾಯಧನ, 26 ಮಂದಿಗೆ ಸಂಧ್ಯಾ ಸುರಕ್ಷಾ, 9 ಮಂದಿಗೆ ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನ ವೇತನ, ಪಡಿತರ ಚೀಟಿ, ಮನೆ ಮಂಜೂರಾತಿ ಸೌಲಭ್ಯಗಳನ್ನು ಒದಗಿಸಲಾಯಿತು. ಕಂದಾಯ ಇಲಾಖೆಗೆ ಸಂಬಂಧಿಸಿದ 27, ಪಂಚಾಯತಿಯ 15 ಅರ್ಜಿಗಳು ಸೇರಿದಂತೆ 55 ಕ್ಕೂ ಅಧಿಕ ಅರ್ಜಿಗಳ ವಿಚಾರಣೆ/ ವಿಲೇವಾರಿ ನಡೆಸಲಾಯಿತು. ಆರೋಗ್ಯ ಇಲಾಖೆಯಿಂದ ಶಾಲಾ ಮಕ್ಕಳಿಗೆ ನಡೆಸಿದ ಮಾಹಿತಿ ಶಿಕ್ಷಣ ಸಂವಹನ ಸ್ಪರ್ಧೆಯ ಲಕ್ಕಿ ಡ್ರಾ ವಿಜೇತ ವಿದ್ಯಾರ್ಥಿಗಳಿಗೆ ಕಿಟ್ ವಿತರಿಸಲಾಯಿತು ಹಾಗೂ ಡೆಂಗ್ಯೂ, ಮಲೇರಿಯಾ ಕೋವಿಡ್ ಬಗ್ಗೆ ಅರಿವು ಮೂಡಿಸಲಾಯಿತು.
ಬ್ರಹ್ಮಾವರ ತಹಶೀಲ್ದಾರ ರಾಜ ಶೇಖರ ಮೂರ್ತಿ ಸ್ವಾಗತಿಸಿ , ಅಧ್ಯಾಪಕ ಶಶಿಧರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
