ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎನ್ನಲಾಗಿದೆ.
ರೆಡ್ ಅಲರ್ಟ್:
Advertisement. Scroll to continue reading.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,ಕೊಡಗು, ಹಾಸನ ಸೇರಿ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಎಲ್ಲೆಲ್ಲಿ ಮಳೆ :
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಬೀದರ್, ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
Advertisement. Scroll to continue reading.
ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.