ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಬಳ್ಳಾರಿ ನಾಲಾಗೆ ಬಿದ್ದ ಪರಿಣಾಮ, ಕ್ರೂಸರ್ನಲ್ಲಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಣಬರಗಿ ಬಳಿಯ ಕಲ್ಯಾಳ ಪುಲ್ ಬಳಿ ನಡೆದಿದೆ
ಮೃತರು ದಿನಗೂಲಿಗಾಗಿ ಬೆಳಗಾವಿಗೆ ಬರುತ್ತಿದ್ದರು ಎನ್ನಲಾಗಿದೆ. ಅಪಘಾತದಿಂದ ಮೂವರು ಬದುಕಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೋಲಿಸ್ ಆಯುಕ್ತ ಪೋಲಿಸ್ ಆಯುಕ್ತ ಡಾ. ಬೋರಲಿಂಗಯ್ಯ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
Advertisement. Scroll to continue reading.