ಕರಾವಳಿ

ಪೋಕ್ಸೋ ಕಾಯ್ದೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ

2

ವರದಿ : ಬಿ.ಎಸ್.ಆಚಾರ್ಯ

ಉಡುಪಿ : ಪೋಕ್ಸೋ ಕಾಯ್ದೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ಭಾನುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಪಂಚಾಯತ್ ಏನ್ .ಆರ್ .ಎಲ್ .ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಮಾಹಿತಿ ನೀಡಿ,
ಉಡುಪಿ ಜಿಲ್ಲೆ ಪೋಕ್ಸೋ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಮತ್ತು ಅಪರಾಧ ಪತ್ತೆ ಹಚ್ಚುವಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಅತೀ ಹೆಚ್ಚು ಹೊರ ಜಿಲ್ಲೆಯಿಂದ ಉಡುಪಿಯಲ್ಲಿ ನೆಲಸಿದವರಿಂದ ಇಂತಹ ಅಪರಾಧ ನಡೆದಿದೆ ಹೊರತು ಜಿಲ್ಲೆಯ ಜನರು ಬಾರೀ ವಿರಳ. ಇಲ್ಲಿನ ಪೊಲೀಸ್ ಅಧಿಕಾರಿಗಳು ಮಕ್ಕಳ ಸ್ನೇಹಿಯಾಗಿ ಕೆಲಸ ಮಾಡಿದ ಕಾರಣ ಅಪರಾದ ಕಡಿಮೆಯಾಗಲು ಸಾಧ್ಯವಾಗಿದೆ. ಮಕ್ಕಳು ಮುಂದಿನ ಭವಿಷ್ಯವಾದ ಕಾರಣ ಎಂತಹ ಒತ್ತಡದ ಕೆಲಸ ಇದ್ದರೂ ಕೂಡಾ ನೊಂದ ಮಕ್ಕಳಿಗೆ ನ್ಯಾಯ ನೀಡಬೇಕು ಎಂದರು.

Advertisement. Scroll to continue reading.

ಜಿಲ್ಲೆಯ 23 ಪೊಲೀಸ್ ಠಾಣೆಯ ಅಧಿಕಾರಿಗಳು ತರಬೇತಿ ಯಲ್ಲಿದ್ದು ಪೋಕ್ಸೋ ಕಾಯ್ದೆ ವಿಷಯದಲ್ಲಿ ಚರ್ಚೆ ನಡೆದು ಪ್ರಭಾಕರ ಆಚಾರ್ ಸೂಕ್ತ ಮಾಹಿತಿ ಮತ್ತು ಕಾನೂನಾತ್ಮಕ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಉಡುಪಿ ಜಿಲ್ಲಾ ಪೊಲೀಸ್ ಉಪಾಧೀಕ್ಷ ಸುಧಾಕರ್ ನಾಯ್ಕ್ ಉಪಸ್ಥಿತರಿದ್ದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com