ಮುಂಬೈ : ಮುಂಬೈನ ಕುರ್ಲಾದಲ್ಲಿ ಸೋಮವಾರ ರಾತ್ರಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಾಯಕ್ ನಗರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದ್ದು, ಅವಶೇಷಗಳಡಿ 20-25 ಮಂದಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸುದ್ದಿ ತಿಳಿದಾಕ್ಷಣ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಅವಶೇಷಗಳಡಿ ಸಿಲುಕಿದ್ದ 12 ಜನರನ್ನು ರಕ್ಷಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
Advertisement. Scroll to continue reading.
ಬಿಎಂಸಿ ನಾಲ್ಕೂ ಕಟ್ಟಡಗಳಿಗೆ ನೋಟಿಸ್ ಜಾರಿ ಮಾಡಿತ್ತು. ಆದರೆ ಇಲ್ಲಿ ಇನ್ನೂ ಕೆಲವು ಜನರು ವಾಸಿಸುತ್ತಿದ್ದರು. ಅಷ್ಟರಲ್ಲಿ ದುರಂತ ಸಂಭವಿಸಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವ ಎಲ್ಲ ಜನರನ್ನು ರಕ್ಷಿಸುವುದು ಮೊದಲ ಆದ್ಯತೆಯಾಗಿದೆ. ಇಂತಹ ಘಟನೆಗಳು ನಡೆಯದಂತೆ ಎಚ್ಚೆತ್ತ ಬಿಎಂಸಿ ನೋಟಿಸ್ ನೀಡುತ್ತದೆ. ಬಿಎಂಸಿ ನೋಟಿಸ್ ನೀಡಿದ ಕೂಡಲೇ ಜಾಗ ಖಾಲಿ ಮಾಡುವಂತೆ ಜನತೆಗೆ ಸಚಿವ ಆದಿತ್ಯ ಠಾಕ್ರೆ ಮನವಿ ಮಾಡಿದ್ದಾರೆ.