ಕೋಟ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರ ಪಾರಂಪಳ್ಳಿ ಗ್ರಾಮದಲ್ಲಿ ನಡೆದಿದೆ.
19 ವರ್ಷದ ಮಿಸ್ರಿಯಾ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.
ಮಿಸ್ರಿಯಾ ಕುಂದಾಪುರ ಬ್ಯಾರೀಸ್ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿಕೊಂಡಿದ್ದು, ಎಂದಿನಂತೆ ನಿನ್ನೆ ಬೆಳಿಗ್ಗೆ ಕಾಲೇಜಿಗೆಂದು ಹೋದವಳು ಸಂಜೆ ಮನೆಗೆ ಬಂದಿದ್ದಾಳೆ. ಬಳಿಕ ತನಗೆ ತಲೆನೋವು ಇದೆ ಎಂದು ಹೇಳಿ ಕೋಣೆಗೆ ಹೋಗಿ ಮಲಗಿರುತ್ತಾಳೆ.
Advertisement. Scroll to continue reading.
ಸಂಜೆ 7 ಗಂಟೆಗೆ ಕೋಣೆಯ ಬಾಗಿಲು ತೆರೆದು ನೋಡಿದಾಗ ಕೋಣೆಯಲ್ಲಿ ತಲೆನೋವು ಎಂದು ಮಲಗಿದ್ದ ಮಿಸ್ರಿಯಾಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಕೂಡಲೇ ಕೋಟೇಶ್ವರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆಕೆ ಅದಾಗಲೇ ಮೃತಪಟ್ಟಿದ್ದಳು ಎನ್ನಲಾಗಿದೆ. ಯಾವುದೋ ಕಾರಣಕ್ಕೆ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.