ನವದೆಹಲಿ: ನೂತನ ಉಪರಾಷ್ಟ್ರಪತಿ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದೆ. ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ. ಇಂದು ಈ ಬಗ್ಗೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಆಗಸ್ಟ್ 6 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಚುನಾವಣೆಗೆ ಮತದಾನ ನಡೆಯಲಿದೆ. ಆ ದಿನವೇ ಮತಗಳ ಎಣಿಕೆ ಪ್ರಕ್ರಿಯೂ ನಡೆಯಲಿದೆ.
ಜುಲೈ 5 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಜುಲೈ 19 ರಂದು ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನವಾಗಿರಲಿದೆ. ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ವಾಪಸ್ ಪಡೆದುಕೊಳ್ಳಲು ಜುಲೈ 22 ಕೊನೆಯ ದಿನವಾಗಿದೆ.
Advertisement. Scroll to continue reading.
ಪ್ರಸ್ತುತ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಸೇವೆ ಸಲ್ಲಿಸುತ್ತಿದ್ದು, ಅವರ ಅಧಿಕಾರಾವಧಿ ಆಗಸ್ಟ್ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ.