ಮುಂಬೈ: ಸುಪ್ರೀಂ ಕೋರ್ಟ್ ನಾಳೆ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸಮತ ಯಾಚನೆಗೆ ಸೂಚಿಸಿದ ಬೆನ್ನಲ್ಲೇ ಇದೀಗ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಇಂದು ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದಂತ ಅವರು, ಕಳೆದ ಎರಡೂವರೆ ವರ್ಷಗಳ ಕಾಲ ನನಗೆ ಸಹಕರಿಸಿದಂತ ಎಲ್ಲರಿಗೂ ಧನ್ಯವಾದಗಳು ಎಂಬುದಾಗಿ ಹೇಳಿದ್ದಾರೆ.
ಜೊತೆಗೆ ನಾಳೆ ವಿಶ್ವಾಸಮತ ಯಾಚನೆಗೆ ಮುನ್ನವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
Advertisement. Scroll to continue reading.
ಜೂನ್ 30 ರಂದು ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಸಿಎಂ ಉದ್ಧವ್ ಠಾಕ್ರೆ ಅವರಿಗೆ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಶಿವಸೇನೆಯ ಮುಖ್ಯ ಸಚೇತಕ ಸುನಿಲ್ ಪ್ರಭು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಸುಪ್ರೀಂಕೋರ್ಟ್ ರಾತ್ರಿ 9 ಗಂಟೆಗೆ ತೀರ್ಪು ಕಾಯ್ದಿರಿಸಿತ್ತು. ಇದೀಗ ನಾಳೆ ಸದನದಲ್ಲಿ ವಿಶ್ವಾಸಮತ ಯಾಚಿಸುವಂತೆ ಆದೇಶಿಸಿತ್ತು.
ವಾದ-ಪ್ರತಿವಾದ ಆಲಿಸಿದ ಕೋರ್ಟ್ ರಾಜ್ಯಪಾಲರ ಸೂಚನೆಯಂತೆ ನಾಳೆ ಬೆಳಗ್ಗೆ 11 ಗಂಟೆಗೆ ವಿಶ್ವಾಸಮತಯಾಚನೆ ಮಾಡಲು ಸೂಚನೆ ನೀಡಿತ್ತು.
Advertisement. Scroll to continue reading.