ಮುಂಬೈ: ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ-20 ಮತ್ತು ಏಕದಿನ ಸರಣಿಗೆ ಹಿರಿಯರ ಆಯ್ಕೆ ಸಮಿತಿಯು ತಂಡವನ್ನು ಪ್ರಕಟಿಸಿದೆ. ಎರಡೂ ಸರಣಿಗಳಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ವಿರಾಟ್ ಕೊಹ್ಲಿ ಕೂಡ ಪ್ರಥಮ ಟಿ-20 ನಂತರ ತಂಡಕ್ಕೆ ಮರಳಲಿದ್ದಾರೆ.
ಜುಲೈ 7 ರಿಂದ ಪ್ರಾರಂಭವಾಗುವ ಮೂರು ಟಿ-20 ಸರಣಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ಪರಸ್ಪರ ಸೆಣಸಾಡಲಿವೆ. ಜುಲೈ 12 ರಿಂದ ಮೂರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳ ಸರಣಿ ಆರಂಭವಾಗಲಿದೆ.
ಈ ನಡುವೆ ಜುಲೈ 1 ರಿಂದ ಎಡ್ಜ್ಬಾಸ್ಟನ್ನಲ್ಲಿ ನಡೆಯಲಿರುವ ಐದನೇ ಮತ್ತು ಅಂತಿಮ ಟೆಸ್ಟ್ನಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಆಡಲಿದೆ.
Advertisement. Scroll to continue reading.
ಪ್ರಥಮ ಟಿ-20 ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆ), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋ ಪಟೇಲ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್
ದ್ವಿತೀಯ ಮತ್ತು ತೃತೀಯ ಟಿ-20 ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (WK), ರಿಷಬ್ ಪಂತ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್
Advertisement. Scroll to continue reading.