ಕೊಡಗು : ಇಂದು ಮತ್ತೆ ಕೊಡಗಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಇದು 7 ನೇ ಬಾರಿ ಭೂಕಂಪನವಾಗಿರುವುದು. ಇದು ಜನರಲ್ಲಿ ಮತ್ತಷ್ಟು ಆತಂಕ ಮನೆ ಸೃಷ್ಟಿಸಿದೆ.
ಮಡಿಕೇರಿ ತಾಲೂಕಿನ ಚೆಂಬು, ಪೆರಾಜೆ ಹಾಗೂ ಕರಿಕೆಯಲ್ಲಿ ಭೂಮಿ ಮತ್ತೆ ನಡುಗಿದೆ. ಇಂದು ಮಧ್ಯಾಹ್ನ 1.20 ರ ಸುಮಾರಿಗೆ ಭಾರಿ ಶಬ್ದದೊಂದಿಗೆ 3/4 ಸೆಕೆಂಡ್ ಭೂಮಿ ಕಂಪಿಸಿದೆ.
ಮತ್ತೊಂದೆಡೆ ಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯ ಆರ್ಭಟಕ್ಕೆ ಕೊಡಗಿನ ಹಲವೆಡೆ ಸಣ್ಣಪುಟ್ಟ ಗುಡ್ಡ ಕುಸಿಯಲು ಆರಂಭವಾಗಿದ್ದು, ಜಿಲ್ಲೆಯ ಜನತೆ ಆತಂಕಕ್ಕೆ ಒಳಗಾಗಿದ್ದಾರೆ.
Advertisement. Scroll to continue reading.