ಹಿಮಾಚಲ ಪ್ರದೇಶ : ಖಾಸಗಿ ಬಸ್ಸೊಂದು ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಕುಲುವಿನಲ್ಲಿ ನಡೆದಿದೆ.
ಇಂದು ಬೆಳಗ್ಗೆ 8:30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಶೈನ್‌ಶಾರ್‌ನಿಂದ ಸೈಂಜ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಜಂಗ್ಲಾ ಗ್ರಾಮದ ಬಳಿ ರಸ್ತೆಯಿಂದ ಆಳದ ಪ್ರಪಾತಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ಮಕ್ಕಳು ಸೇರಿದಂತೆ 16 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಬಸ್‌ನಲ್ಲಿ 35- 40 ಮಂದಿ ಇದ್ದರು ಎನ್ನಲಾಗಿದೆ.
ಅಪಘಾತ ಸಂಭವಿಸಿದ ಸ್ಥಳವು ಅತ್ಯಂತ ಕಷ್ಟಕರ ಪ್ರದೇಶವಾಗಿದೆ. ಬಸ್ ಅತ್ಯಂತ ಆಳವಾದ ಪ್ರಪಾತಕ್ಕೆ ಬಿದ್ದಿರುವುದರಿಂದ ಬಸ್ ನಜ್ಜುಗುಜ್ಜಾಗಿದೆ.
Advertisement. Scroll to continue reading.
ಪ್ರಧಾನಿ ಪರಿಹಾರ ಘೋಷಣೆ:
ಅಪಘಾತ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಹಿಮಾಚಲ ಪ್ರದೇಶದ ಕುಲ್ಲುವಿನಲ್ಲಿ ಸಂಭವಿಸಿದ ಬಸ್ ಅಪಘಾತ ಹೃದಯ ವಿದ್ರಾವಕವಾಗಿದೆ. ಕುಟುಂಬಸ್ಥರಿಗೆ ತಮ್ಮವರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಹೇಳಿದ್ದಾರೆ .
ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
Advertisement. Scroll to continue reading.