ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಉಡುಪಿ ಮೂಲದ ಸಿನಿ ಶೆಟ್ಟಿ
Published
1
ಮುಂಬೈ : 2022ನೇ ಸಾಲಿನ ಮಿಸ್ ಇಂಡಿಯಾ ಕಿರೀಟವನ್ನು ಉಡುಪಿಯ ಇನ್ನಂಜೆಯ ಸಿನಿ ಶೆಟ್ಟಿ ಮಿಸ್ ಇಂಡಿಯಾ ಮುಡಿಗೇರಿಸಿಕೊಂಡಿದ್ದಾರೆ.
ಭಾನುವಾರ ಸಂಜೆ ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ನಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ ಮಿಸ್ ಇಂಡಿಯಾ 2020 ತೆಲಂಗಾಣದ ಮಾನಸಾ ವಾರಣಾಸಿ, ಸಿನಿ ಶೆಟ್ಟಿಗೆ ಮಿಸ್ ಇಂಡಿಯಾ 2022 ಕಿರೀಟವನ್ನು ತೊಡಿಸಿದರು.
ಉಡುಪಿ ಇನ್ನಂಜೆ ಮೂಲದವರಾದ ಸಿನಿ ಶೆಟ್ಟಿ ಅವರು ಮುಂಬೈನಲ್ಲಿ ಜನಿಸಿದರು. ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಸಿನಿ ಶೆಟ್ಟಿ ಪ್ರಸ್ತುತ ಚಾರ್ಟರ್ಡ್ ಫೈನಾನ್ಷಿಯಲ್ ಅನಾಲಿಸ್ಟ್ (ಸಿಎಫ್ಎ) ಕೋರ್ಸ್ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
Advertisement. Scroll to continue reading.
ಅವರು ಪ್ರತಿಷ್ಠಿತ 71 ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.