ನವದೆಹಲಿ : ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಪಹಲ್ಗಾಮ್ನ ನುನ್ವಾನ್ ಬೇಸ್ ಕ್ಯಾಂಪ್ನಿಂದ ಪವಿತ್ರ ಗುಹೆಯತ್ತ ತೆರಳಲು ಯಾತ್ರಾರ್ಥಿಗಳನ್ನು ಅನುಮತಿ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಮರನಾಥ ಯಾತ್ರಾರ್ಥಿಗಳ ಮೊದಲ ಬ್ಯಾಚ್ ಕಳೆದ ಗುರುವಾರ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಮೂಲ ಶಿಬಿರವನ್ನು ತಲುಪಿತ್ತು.
Advertisement. Scroll to continue reading.
ಕೋವಿಡ್ ಕಾರಣದಿಂದ ಕಳೆದೆರಡು ವರ್ಷಗಳಿಂದ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಕಳೆದ ವಾರ ಯಾತ್ರೆ ಪುನರಾರಂಭಗೊಂಡಿತ್ತು.