ಜಪಾನ್ : ಜಪಾನ್ ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಜಪಾನ್ ನ ನಾರಾ ನಗರದಲ್ಲಿ ನಡೆದಿದೆ.
ಜಪಾನ್ ನ ನಾರಾ ನಗರದಲ್ಲಿ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ ಮಾಡಲಾಗಿದೆ ಎಂದು ಎನ್ಎಚ್ಕೆ ಮಾಧ್ಯಮ ವರದಿ ಮಾಡಿದೆ
ಮಾಜಿ ಪ್ರಧಾನಿ ಶಿಂಜೊ ಅಬೆ ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ಫೈರಿಂಗ್ ನಡೆಸಿದ್ದಾರೆ. ಸದ್ಯ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
Advertisement. Scroll to continue reading.
ಪಶ್ಚಿಮ ಜಪಾನ್ ನ ನಾರಾ ನಗರದಲ್ಲಿ ಭಾಷಣ ಮಾಡುವಾಗ ಹಿಂದಿನಿಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಶಿಂಜೋ ಅಬೆ ಗಾಯಗೊಂಡಿದ್ದು, ಸದ್ಯ ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.