ದೆಹಲಿ: ದೀರ್ಘ ಕಾಲ ಜಪಾನ್ನ ಪ್ರಧಾನಿಯಾಗಿದ್ದ ಶಿಂಜೊ ಅಬೆ ಮೇಲೆ ನಡೆದ ಗುಂಡಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ‘ನನ್ನ ಆತ್ಮೀಯ ಸ್ನೇಹಿತ ಶಿಂಜೋ ಅಬೆ ಮೇಲಿನ ದಾಳಿಯಿಂದ ತೀವ್ರ ದುಃಖವಾಗಿದೆ’ ಎಂದಿದ್ದಾರೆ.
ಪಶ್ಚಿಮ ಜಪಾನ್ನಲ್ಲಿ ಇಂದು ಪ್ರಚಾರ ಭಾಷಣದ ವೇಳೆ ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡು ಹಾರಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪ್ರಧಾನಿ ಮೋದಿ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನ ಆತ್ಮೀಯ ಸ್ನೇಹಿತ ಶಿಂಜೋ ಅಬೆ ಮೇಲಿನ ದಾಳಿಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಕುಟುಂಬ ಮತ್ತು ಜಪಾನ್ ಜನರೊಂದಿಗೆ ಇವೆ ಎಂದು ಹೇಳಿದ್ದಾರೆ.
Advertisement. Scroll to continue reading.