ಟೋಕಿಯೋ : ಪಶ್ಚಿಮ ಜಪಾನಿನ ನಾರಾ ನಗರದಲ್ಲಿ ಚುನಾವಣಾ ಪ್ರಚಾರದ ವೇಳೆ ಗುಂಡಿನ ದಾಳಿಗೊಳಗಾಗಿ ತೀವ್ರ ಗಾಯಗೊಂಡಿದ್ದ ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇಂದು ಜಪಾನ್ ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಮೇಲೆ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿದ್ದ. ಶಂಕಿತ ಶೂಟರ್ ನಾರಾ ನಿವಾಸಿ 41 ವರ್ಷದ ಯಮಗಾಮಿ ತೆಟ್ಸುಯಾ ಎನ್ನಲಾಗಿದೆ. ಆತನನ್ನು ಹಾಗೂ ಸ್ಥಳದಲ್ಲಿ ಪೊಲೀಸರು ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.
ಅಬೆ ಅವರು ಇಂದು ಭಾಷಣ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದೂಕಿನಿಂದ ಗುಂಡು ಹಾರಿಸಲಾಗಿತ್ತು. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಂತ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
Advertisement. Scroll to continue reading.