ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಜುಲೈ 13ರವರೆಗೆ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಜುಲೈ 12ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. 205 ಮಿ.ಮೀ.ಗಿಂತಲೂ ಅಧಿಕ ಮಳೆಯಾಗುವ ನಿರೀಕ್ಷೆ ಇದೆ. ಗಾಳಿಯ ಜೊತೆಗೆ ಸಮುದ್ರದ ಅಬ್ಬರವೂ ಹೆಚ್ಚಾಗಲಿದೆ ಎನ್ನಲಾಗಿದೆ.
ಜುಲೈ 13 ಮತ್ತು 14 ರಂದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
Advertisement. Scroll to continue reading.
ಎಲ್ಲೆಲ್ಲಿ ಮಳೆ ?
ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಶಿವಮೊಗ್ಗ ಮತ್ತು ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಯಾದಗಿರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಮೈಸೂರು ಜಿಲ್ಲೆಯಲ್ಲಿಯೂ ಮಳೆಯಾಗುವ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Advertisement. Scroll to continue reading.