ಶಿವಮೊಗ್ಗ : ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದಿದೆ. ಹೀಗಾಗಿ ಕರಾವಳಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.
ಕುಸಿತವಾಗಿರುವ ಮಣ್ಣು ಮತ್ತು ಮರಮುಟ್ಟುಗಳನ್ನು ತೆರವುಗೊಳಿಸುವ ಕಾರ್ಯ ಚುರುಕುಗೊಂಡಿದೆ.
ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಜುಲೈ 12ರ ಮುಂಜಾನೆ 8 ಗಂಟೆಯವರೆಗೂ ನಿರ್ಬಂಧಿಸಲಾಗಿದೆ. ಬಳಿಕ ಜುಲೈ 30ರ ವರೆಗೆ ಈ ಮಾರ್ಗದಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
Advertisement. Scroll to continue reading.
ಬದಲಿ ಮಾರ್ಗ: ಶಿವಮೊಗ್ಗದಿಂದ ಉಡುಪಿ-ಮಂಗಳೂರಿಗೆ ಹೋಗುವ ಪ್ರಯಾಣಿಕರು ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ- ಕಾರ್ಕಳ-ಮಂಗಳೂರು ತಲುಪಬಹುದು ಅಥವಾ ತೀರ್ಥಹಳ್ಳಿ-ಮಾಸ್ತಿಕಟ್ಟೆ-ಕುಂದಾಪುರ ಮಾರ್ಗವನ್ನು ಬಳಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.