ಕೊಲಂಬೊ : ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ. ಅವರು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರಿಗೆ ಈ ಹಿಂದೆ ಘೋಷಿಸಿದಂತೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ ಎಂದು ಪ್ರಧಾನಿ ಕಚೇರಿ ಸೋಮವಾರ ಹೇಳಿದೆ.
ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಸಾವಿರಾರು ಪ್ರತಿಭಟನಾಕಾರರು ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ನುಗ್ಗಿದ ನಂತರ ರಾಜಪಕ್ಸೆ ಬುಧವಾರ ರಾಜೀನಾಮೆ ನೀಡಲಿದ್ದಾರೆ ಎಂದು ಸಂಸದೀಯ ಸ್ಪೀಕರ್ ತಿಳಿಸಿದ್ದರು.
ಪ್ರಧಾನಿ ಹುದ್ದೆಗೆ ವಿಕ್ರಮಸಿಂಘೆ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ, ಇದೀಗ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ಕೂಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
Advertisement. Scroll to continue reading.
https://twitter.com/ANI/status/1546331627865149440?t=4rWMAjLETtxIUX6iN7LApw&s=19