ಕಲಬುರಗಿ : ಹಾಡಹಗಲೇ ನಗರಸಭೆ ಅಧ್ಯಕ್ಷೆ ಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಹಬಾದ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಗಿರೀಶ್ ಕಂಬನೂರ್ (42) ಕೊಲೆಯಾದ ವ್ಯಕ್ತಿ.
ಗಿರೀಶ್ ಕಂಬನೂರ ಕಾಂಗ್ರೆಸ್ ಪಕ್ಷದ ಮುಖಂಡನಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೆ ವೈಷಮ್ಯವೇ ಹತ್ಯೆಗೆ ಕಾರಣ ಎಂದು ಶಂಕೆ ವ್ಯಕ್ತವಾಗಿದೆ.
ಶಹಬಾದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಟಿಕೆಟ್ ಬುಕ್ ಮಾಡಲು ಬಂದಾಗ ಗಿರೀಶ್‌ನನ್ನ ದುಷ್ಕರ್ಮಿಗಳು ಕೃತ್ಯ ಎಸಗಿಸಿದ್ದಾರೆ. ಅಲ್ಲದೇ, ಮಾರಕಾಸ್ತ್ರಗಳನ್ನು ದೇಹದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ನರಳಾಡಿ ಗಿರೀಶ್ ಮೃತಪಟ್ಟಿದ್ದಾರೆ.
Advertisement. Scroll to continue reading.
ಕಳೆದ 2 ವರ್ಷದ ಹಿಂದೆ ಗಿರೀಶ್ ಸಹೋದರ ಸತೀಶ್ ಕಂಬನೂರ್ ಹತ್ಯೆಯಾಗಿತ್ತು.
ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವ ಸ್ಥಳಾಂತರಿಸಲಾಗಿದೆ. ಈ ಕುರಿತು ಶಹಬಾದ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
Advertisement. Scroll to continue reading.