Uncategorized

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

0

ಉಡುಪಿ : ಉಡುಪಿ ಜಿಲ್ಲೆಯಲ್ಲೂ ಇಂದು ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮದ ಉದ್ಘಾಟನೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಡೆಯಿತು.
ನಾಲ್ಕನೇ ದರ್ಜೆಯ ಸಿಬ್ಬಂದಿಗಳಿಗೆ ಪ್ರಥಮ ಲಸಿಕೆ ನೀಡುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿ ಜಿ. ಜಗದೀಶ್, ಶಾಸಕ ರಘುಪತಿ ಭಟ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್ ಚಂದ್ರ ಚೂಡ ಮೊದಲಾದವರು ಉಪೊಸ್ಥಿತರಿದ್ದರು. 12,000 ಡೋಸ್ ಲಸಿಕೆ ಉಡುಪಿ ಜಿಲ್ಲೆಗೆ ಬಂದಿದ್ದು, ಇಂದು 6 ಕೇಂದ್ರಗಳಲ್ಲಿ ತಲಾ ನೂರರಂತೆ 600 ಕೋವಿಡ್ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆ, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಡಾ.ಟಿ.ಎಂ.ಎ.ಪೈ ಆಸ್ಪತ್ರೆ, ಕುಂದಾಪುರದ ಮತ್ತು ಕಾರ್ಕಳದ ತಾಲೂಕು ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದೆ.

https://diksoochinews.in/wp-content/uploads/2021/01/A-to-Z-ADD-1.mp4

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com