ಕಲಬುರಗಿ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂಚೋಳಿ ತಾಲೂಕಿನ ಹೂವಿನಹಳ್ಳಿ ಬಳಿ ನಡೆದಿದೆ.
ಮೃತಪಟ್ಟವರನ್ನು ಜಗನ್ನಾಥ (35), ಮೆಹಬೂಬ್ ಅಲಿ (45) ಹಾಗೂ ಶಾದಿಪುರ ಗ್ರಾಮದ ಶ್ರೀಕಾಂತ್ (30) ಎಂದು ಗುರುತಿಸಲಾಗಿದೆ. ಅಮರ್ ಗಾಯಗೊಂಡವರು.
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement. Scroll to continue reading.
ಅಪಘಾತವಾದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.