Uncategorized

0

ಕೋಲ್ಕತ್ತಾ : 19 ವರ್ಷದ ಮಾಡೆಲ್‌ವೊಬ್ಬರು ಕೋಲ್ಕತ್ತಾದಲ್ಲಿ ತನ್ನ ಬಾಡಿಗೆ ಮನೆಯ ಸೀಲಿಂಗ್ ಫ್ಯಾನ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದಾರೆ.

19 ವರ್ಷದ ಪೂಜಾ ಸರ್ಕಾರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಘಟನಾ ಸ್ಥಳದಲ್ಲಿ ಯಾವುದೇ ಪತ್ರ ಪತ್ತೆಯಾಗಿಲ್ಲದ ಕಾರಣ, ಇದು ಆತ್ಮಹತ್ಯೆಯೋ ಅಥವಾ ಕೊಲೆಯ ಎಂದು ಇನ್ನೂ ತಿಳಿದುಬಂದಿಲ್ಲ. ಹೀಗಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement. Scroll to continue reading.

‘ನಾಲ್ಕು ಅಂತಸ್ತಿನ ಅಪಾರ್ಟ್‌ಮೆಂಟ್‌ನ ನೆಲ ಮಹಡಿಯಲ್ಲಿ ಬಾಡಿಗೆ ಇದ್ದ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ಟವೆಲ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್‌ನ ಶವ ಪತ್ತೆಯಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ 24 ಪರಗಣ ಮೂಲದ ಸರ್ಕಾರ್ ಅವರು ಗೋಬರ್ದಂಗ ಹಿಂದೂ ಕಾಲೇಜಿನಲ್ಲಿ ವ್ಯಾಸಂಗ ಮಾಡಿದರು ಎಂದು ವರದಿಗಳು ತಿಳಿಸಿವೆ. ಮೇ ಮೂರನೇ ವಾರದಲ್ಲಿ ಇಬ್ಬರು ಮಾಡೆಲ್‌ಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ಈ ಸುದ್ದಿ ವರದಿಯಾಗಿದೆ.

ಬಿದಿಶಾ ಡಿ ಮಜುಂದಾರ್ ಮೇ 24 ರಂದು ತನ್ನ ಡಮ್ಡಮ್ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಆಕೆಯ ಸ್ನೇಹಿತೆ ಮತ್ತು ಉದ್ಯಮದ ಸಹೋದ್ಯೋಗಿ ಮಂಜುಷಾ ನಿಯೋಗಿ ಮೇ 27 ರಂದು ತನ್ನ ಪಟುಲಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com