ಬರೇಲಿ : ಕೋತಿಯೊಂದು ಮೂರು ಅಂತಸ್ತಿನ ಮನೆಯ ಛಾವಣಿಯಿಂದ 4 ನಾಲ್ಕು ತಿಂಗಳ ಗಂಡು ಮಗುವನ್ನು ಎಸೆದ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ.
ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ.
ಬರೇಲಿಯ ಡುಂಕಾ ಗ್ರಾಮದ ನಿವಾಸಿ ನಿರ್ದೇಶ್ ಉಪಾಧ್ಯಾಯ ಅವರು ಶುಕ್ರವಾರ ಸಂಜೆ ನಾಲ್ಕು ತಿಂಗಳ ಮಗು ಮತ್ತು ಅವರ ಪತ್ನಿಯೊಂದಿಗೆ ತಮ್ಮ ಮೂರು ಅಂತಸ್ತಿನ ಮನೆಯ ಟೆರೇಸ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು.
Advertisement. Scroll to continue reading.
ಇದ್ದಕ್ಕಿದ್ದಂತೆ ಕೋತಿಗಳ ಹಿಂಡು ಛಾವಣಿಯ ಮೇಲೆ ಬಂದಿದ್ದು, ದಂಪತಿಗಳು ಮಂಗಗಳನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಆದರೆ, ಅವು ಸುತ್ತುವರೆದಿದ್ದು, ಅವರು ಮೆಟ್ಟಿಲುಗಳ ಕಡೆಗೆ ಓಡಲು ಪ್ರಯತ್ನಿಸಿದಾಗ, ಮಗು ಅವರ ಕೈಯಿಂದ ಕೆಳಗೆ ಬಿದ್ದಿದೆ.
ನಿರ್ದೇಶ್ ಮಗುವನ್ನು ಹಿಡಿಯುವ ಮೊದಲು, ಕೋತಿಯು ನವಜಾತ ಶಿಶುವನ್ನು ಹಿಡಿದು ಛಾವಣಿಯಿಂದ ಎಸೆದಿದೆ. ಪರಿಣಾಮ ಮಗು ಸ್ಥಳದಲ್ಲೇ ಬಿದ್ದು ಸಾವನ್ನಪ್ಪಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ.
Advertisement. Scroll to continue reading.