ಬೆಂಗಳೂರು : ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಬೆಂಗಳೂರಿನ ಶಿವಾಜಿನಗರದ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಚಿತ್ತೂರು ಜಿಲ್ಲೆಯ ಪೂತನಪೆಟ್ಟು ತಾಲೂಕಿನ ಪಿ. ಕೊತ್ತಕೊಟ ಗ್ರಾಮದ ಬಳಿ ಅಪಘಾತ ನಡೆದಿದ್ದು, ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಸಬ್ ಇನ್ಸ್ಪೆಕ್ಟರ್ ಅವಿನಾಶ್, ಅನಿಲ್ ಹಾಗೂ ಡ್ರೈವರ್ ಸ್ಥಳದಲ್ಲೇ ಸಾವನ್ನಪಿದ್ದು, ದೀಕ್ಷಿತ್ ಹಾಗೂ ಕಾನ್ಸಟೇಬಲ್ ಶರಣ ಬಸವ ಗಂಭೀರವಾಗಿ ಗಾಯಗೊಂಡಿದ್ದಾರೆ.
Advertisement. Scroll to continue reading.
ತಿರುಪತಿಗೆ ಹೋಗುತ್ತಿದ್ದ ವೇಳೆ ನಿದ್ದೆ ಮಂಪರಿನಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಗಾಯಗೊಂಡವರನ್ನು ಚಿತ್ತೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement. Scroll to continue reading.