ನವದೆಹಲಿ : ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಪ್ರಕರಣ 4ಕ್ಕೆ ಏರಿಕೆಯಾಗಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ 31 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಲಕ್ಷಣ ಕಂಡುಬಂದಿದೆ. ಜ್ವರ ಮತ್ತು ಚರ್ಮದ ಗಾಯಗಳು ಕಂಡು ಬಂದಿದ್ದು, ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ವ್ಯಕ್ತಿಯನ್ನು ದೆಹಲಿಯ ಎಲ್ಎನ್ ಜೆ ಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳ ಹಿಂದೆ ಜ್ವರ ಮತ್ತು ದದ್ದುಗಳು ದೇಹದ ಮೇಲೆ ಬಂದಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಕಳೆದ ಕೆಲವು ದಿನಗಳಲ್ಲಿ, ಆ ವ್ಯಕ್ತಿ ಹಿಮಾಚಲ ಪ್ರದೇಶದಿಂದ ಹಿಂದಿರುಗಿದ್ದಾರೆ ಎನ್ನಲಾಗಿದೆ.
ದೇಶದಲ್ಲಿ 3 ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿವೆ.
Advertisement. Scroll to continue reading.
ಮಂಕಿಪಾಕ್ಸ್ 75ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆಯು ‘ಜಾಗತಿಕ ಆರೋಗ್ಯ ತುರ್ತುಸ್ಥಿತಿ’ ಎಂದು ಶನಿವಾರ ಘೋಷಿಸಿತ್ತು. ಜಾಗತಿಕವಾಗಿ 16,000ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ಈ ವರೆಗೆ ಐದು ಮಂದಿ ಮೃತಪಟ್ಟಿದ್ದಾರೆ.