ಹೈದರಾಬಾದ್: ಒಲಿಂಪಿಕ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನಾ ಭಾರತದ ಬಾಕ್ಸಿಂಗ್ ಫೆಡರೇಶನ್ ಮೇಲೆ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಭಾರತದ ಬಾಕ್ಸಿಂಗ್ ಫೆಡರೇಶನ್ನಿಂದ ತಾವು ಮಾನಸಿಕ ಕಿರುಕುಳ ಅನುಭವಿಸಿರುವುದಾಗಿ ಹೇಳಿಕೊಂಡಿದ್ದಾರೆ. ಭಾರತದ ಬಾಕ್ಸಿಂಗ್ ಫೆಡರೇಶನ್(ಬಿಎಫ್ಐ) ತನಗೆ ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಭಾರತ ಬಾಕ್ಸಿಂಗ್ ಫೆಡರೇಶನ್ ತನ್ನೊಂದಿಗೆ ಕೊಳಕು ರಾಜಕೀಯ ಮಾಡುತ್ತಿದೆ ಎಂದಿರುವ ಬಾಕ್ಸರ್, ನನ್ನ ಮೇಲೆ ಕಿರುಕುಳ ನಡೆಯುತ್ತಿದೆ ಎಂದು ಬಹಿರಂಗಪಡಿಸಲು ಬಯಸುತ್ತೇನೆ. ಇದು ಅತ್ಯಂತ ದುಃಖದ ಸಂಗತಿ. ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲಲು ಸಹಾಯ ಮಾಡಿದ ತರಬೇತುದಾರರನ್ನ ತೆಗೆದುಹಾಕಲಾಗಿದೆ. ಇದರಿಂದ ನನ್ನ ತರಬೇತಿಗೆ ಅಡ್ಡಿಯಾಗಿದೆ ಎಂದು ಆರೋಪಿಸಿದ್ದಾರೆ.
ಕ್ರೀಡಾಕೂಟಕ್ಕೆ ಎಂಟು ದಿನ ಮುಂಚಿತವಾಗಿ ನನ್ನ ತರಬೇತಿ ಪ್ರಕ್ರಿಯೆ ನಿಲ್ಲಿಸಲಾಗಿದೆ. ಜೊತೆಗೆ ಓರ್ವ ತರಬೇತುದಾರನನ್ನು ಭಾರತಕ್ಕೆ ವಾಪಸ್ ಕಳುಹಿಸಲಾಗಿದ್ದು, ಇದರಿಂದ ಕಾಮನ್ವೆಲ್ತ್ ಗೇಮ್ಸ್ ಮೇಲೆ ಹೇಗೆ ಗಮನಹರಿಸಬೇಕು ಎಂಬುದು ಗೊತ್ತಾಗುತ್ತಿಲ್ಲ ಎಂದಿದ್ದಾರೆ.
Advertisement. Scroll to continue reading.
ಎಲ್ಲ ರಾಜಕೀಯದಿಂದ ನನ್ನ ಆಟ ಹಾಳಾಗಲು ಬಿಡುವುದಿಲ್ಲ. ನನ್ನ ದೇಶಕ್ಕಾಗಿ ರಾಜಕೀಯದ ಕಿರುಕುಳದ ಮಧ್ಯೆ ಪದಕ ಗೆದ್ದು ತರುತ್ತೇನೆ ಎಂದು ಅವರು ಹೇಳಿದ್ದಾರೆ.