ಜಗಳೂರು : 10 ಸಾವಿರಕ್ಕೂ ಹೆಚ್ಚು ಗ್ರಾಮೀಣ ಮಹಿಳೆಯರಿಗೆ ಹೆರಿಗೆ ಮಾಡಿಸಿದ್ದ ಸೂಲಗಿತ್ತಿ ಸುಲ್ತಾನ್ ಬಿ (85) ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ದಶಕಗಳ ಕಾಲ ಹಳ್ಳಿಗಾಡಿನ ಬಡ ಹೆಣ್ಣುಮಕ್ಕಳಿಗೆ ಸುರಕ್ಷಿತ ಹೆರಿಗೆ ಮಾಡಿಸಿ, ಜೀವರಕಕ್ಷಿಯಾಗಿದ್ದ ಅವರು ಸುಲ್ತಾನಮ್ಮ ಎಂದೇ ಹೆಸರಾಗಿದ್ದರು.
ಜಗಳೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದವರಾದ ಸುಲ್ತಾನ್.ಬಿ ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳೇ ಇಲ್ಲದ ಸಂದರ್ಭದಲ್ಲಿ ಹೆರಿಗೆ ಮಾಡಿಸಲು ಆರಂಭಿಸಿದ್ದರು. ಅವರು ಸುಮಾರು 7 ದಶಕಗಳ ಕಾಲ 10 ಸಾವಿರಕ್ಕೂ ಹೆಚ್ಚು ಹೆರಿಗೆಗಳನ್ನು ಉಚಿತವಾಗಿ ಮಾಡಿದ್ದರು.
Advertisement. Scroll to continue reading.
ಇಸುಬು, ಹುಳಕಡ್ಡಿಗೂ ಸೇರಿದಂತೆ ಹಲವು ಚರ್ಮ ಸಂಬಂಧಿ ರೋಗಗಳು ಪರಿಣಾಮಕಾರಿ ನಾಟಿ ಔಷಧ ಕೊಡುತ್ತಿದ್ದರು. ಅಲೋಪಥಿ ವೈದ್ಯರಿಂದ ಗುಣಮುಖವಾಗದ ಹಲವು ಚರ್ಮರೋಗಳನ್ನು ಗಿಡಮೂಲಿಕೆ ಚಿಕಿತ್ಸೆಯ ಮೂಲಕ ಗುಣಪಡಿಸುತ್ತಿದ್ದರು.
ಅವರ ಸೇವೆಗೆ 2021ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
Advertisement. Scroll to continue reading.