ನವದೆಹಲಿ : ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ 2022 ರಿಂದ ಹೊರಗುಳಿಯಲಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ತೊಡೆಯ ಗಾಯದಿಂದಾಗಿ ನೀರಜ್ ಚತುಷ್ಕೋನ ಸ್ಪರ್ಧೆಯಿಂದ ಹೊರಗುಳಿಯುತ್ತಿದ್ದಾರೆ ಎಂದು ಹೇಳಲಾಗಿದೆ.
ಒರೆಗಾನ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2022 ರ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಬೆಳ್ಳಿ ಪದಕ ಗೆದ್ದಿದ್ದರು.
ತಮ್ಮ ನಾಲ್ಕನೇ ಪ್ರಯತ್ನದಲ್ಲಿ, ಭಾರತೀಯ ಜಾವೆಲಿನ್ ಎಸೆತಗಾರ 88.13 ಮೀಟರ್ ದೂರ ಎಸೆಯುವ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಏಕೈಕ ಎರಡನೇ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಾಲ್ಕನೇ ಎಸೆತದ ನಂತರವೇ ಅವರ ತೊಡೆ ಭಾಗದಲ್ಲಿ ಗಾಯವಾಗಿದ್ದು, ಹೀಗಾಗಿ ಕಾಮನ್ವೆಲ್ತ್ ಗೇಮ್ಸ್ ಭಾಗವಹಿಸುವುದು ಸೂಕ್ತವಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ವಿಶೇಷ ಎಂದರೆ ವಿಶ್ವ ಅಥ್ಲೆಟಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ನೀರಜ್ ಚೋಪ್ರಾ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವ ವಿಶ್ವಾಸದಲ್ಲಿದ್ದರು. ಅಲ್ಲದೆ ಈ ವರ್ಷ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಕಾರಣ ಬರ್ಮಿಂಗ್ಹ್ಯಾಮ್‌ನಲ್ಲಿ ಯೂ ಪದಕ ಗೆಲ್ಲುವ ನಿರೀಕ್ಷೆಯಿತ್ತು.
Advertisement. Scroll to continue reading.