ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :ಎನ್‌ಐಎ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ

1

ಬೆಂಗಳೂರು : ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಇದೀಗ ಎನ್‌ಐಎ ತನಿಖೆಗೆ ವಹಿಸಿ ಆದೇಶಿಸಿದೆ.

ಪ್ರವೀಣ್ ಹತ್ಯೆ ಹಿಂದೆ ಅಂತರರಾಜ್ಯದ ನಂಟಿರೋದಾಗಿ ಹೇಳಲಾಗುತ್ತಿದೆ. ಆ ಕುರಿತಂತೆ ತನಿಖೆ ನಡೆಸಿ ಹತ್ಯೆಯ ಆರೋಪಿಗಳ ಸಮಗ್ರ ಮಾಹಿತಿ ಕಲೆ ಹಾಕಿ, ತಪ್ಪಿತಸ್ತರಿಗೆ ಶಿಕ್ಷೆ ಕೊಡಿಸೋ ನಿಟ್ಟಿನಲ್ಲಿ ಎನ್‌ಐಎ ತನಿಖೆಗೆ ವಹಿಸಿದೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರ್‌ ಹತ್ಯೆ ಪೂರ್ವಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ನಾವು ಇದನ್ನು ಕೊಲೆ ಪ್ರಕರಣವಾಗಿ ನೋಡುತ್ತಿಲ್ಲ. ದೇಶವನ್ನು ಛಿದ್ರ ಮಾಡುವ ಯೋಜನಾಬದ್ಧ ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಿದ್ದೇವೆ. ಅಗತ್ಯಬಿದ್ದರೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಇದೀಗ ಎನ್‌ಐಎಗೆ ವಹಿಸಿ ಆದೇಶಿಸಿದ್ದಾರೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com